ಕಾಂಗ್ರೆಸ್ ಗೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ- ಮಾಜಿ ಸಚಿವ ಕೆ.ಎನ್ ರಾಜಣ್ಣ

ತುಮಕೂರು,ಅಕ್ಟೋಬರ್,27,2025 (www.justkannada.in): ಬಿಜೆಪಿಗೆ ಬಿಎಸ್ ಯಡಿಯೂರಪ್ಪ, ಜೆಡಿಎಸ್ ಗೆ ದೇವೇಗೌಡರು ಹೇಗೆ ಅನಿವಾರ್ಯವೋ ಹಾಗೆಯೇ ಕಾಂಗ್ರೆಸ್ ಗೆ  ಸಿಎಂ ಸಿದ್ದರಾಮಯ್ಯ ಅನಿವಾರ್ಯ ಎಂದು ಮಾಜಿ ಸಚಿವ ಕೆ,ಎನ್ ರಾಜಣ್ಣ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ, ಕೆಲವರು ಕಾಂಗ್ರೆಸ್ ಗೆ ಸಿದ್ದರಾಮಯ್ಯ ಅನಿವಾರ್ಯ ಅಲ್ಲ ಅಂತಾರೆ.  ಆದರೆ ನನ್ನ ಪ್ರಕಾರ ಸಿದ್ದರಾಮಯ್ಯ ಅನಿವಾರ್ಯ. ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲೂ ಸಾಕಷ್ಟು ಬದಲಾವಣೆ ಆಗುತ್ತೆ ಎಂದರು.

ಸಚಿವ ಸಂಪುಟ ಪುನಾರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆ.ಎನ್ ರಾಜಣ್ಣ, 5 ತಿಂಗಳ ಹಿಂದೆ ಪುನಾರಚನೆ ಮಾಡಲು ಹೈಕಮಾಂಡ್ ಹೇಳಿತ್ತು. ಅದನ್ನ ನನಗ ಸಿದ್ದರಾಮಯ್ಯ ತಿಳಿಸಿದ್ದರು. ಡಿಕೆ ಶಿವಕುಮಾರ್ ಭೇಟಿ ವಿಚಾರದಲ್ಲಿ ವಿಶೇಷತೆ ಏನು ಇಲ್ಲ ಎಂದರು.

ದಲಿತ ಸಿಎಂ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆ.ಎನ್ ರಾಜಣ್ಣ, ದಲಿತರು ಮುಂದಿನ ಸಿಎಂ ಅದರೆ ತಪ್ಪೇನಿದೆ.  ಏನೆ ಇದ್ದರೂ ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

Key words: CM, Siddaramaiah,  indispensable, Congress, Former Minister, KN Rajanna