ಮಂಗಳೂರು,ಅಕ್ಟೋಬರ್,27,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಕುರಿತು ಚರ್ಚೆಯಾಗುತ್ತಿದ್ದು, ಇದೀಗ ಐದು ವರ್ಷಗಳ ಕಾಲ ನೀವೇ ಮುಖ್ಯಮಂತ್ರಿ ಆಗಿರುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ 5 ವರ್ಷಗಳ ಪೂರ್ಣಾವಧಿ ಸಿಎಂ ಎಂದು ಹೇಳಿದರು.
ಮಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ತೀರ್ಮಾನಿಸಿದರೆ ನಾನೇ ಪೂರ್ಣಾವಧಿ ಸಿಎಂ. 5 ವರ್ಷ ಸಿದ್ದರಾಮಯ್ಯ ಸಿಎಂ ಎಂಬ ಬೆಂಬಲಿಗರ ಹೇಳಿಕೆ ವೈಯಕ್ತಿಕ . ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.
ಯಾರನ್ನೂ ಸ್ಪರ್ಧೆಯಲ್ಲಿರಬೇಡಿ ಎನ್ನಲು ಆಗಲ್ಲ. ಪ್ರಜಾಪ್ರಭುತ್ವದಲ್ಲಿ ಹುದ್ದೆ ಕೇಳೋದು ಅವರ ಹಕ್ಕು. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: time, CM, high command, decides, CM Siddaramaiah







