ರಾಜ್ಯದಲ್ಲಿ 32 ಸಾವಿರ ಶಿಕ್ಷಕರ ನೇಮಕಾತಿ ಮಾಡುತ್ತೇವೆ : ಸಚಿವ ಮಧು ಬಂಗಾರಪ್ಪ‍

ಬೆಂಗಳೂರು,ಅಕ್ಟೋಬರ್,30,2025 (www.justkannada.in): ರಾಜ್ಯದಲ್ಲಿ ಶೀಘ್ರವೇ 32 ಸಾವಿರ ಶಿಕ್ಷಕರನ್ನ ನೇಮಕ ಮಾಡಿಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯಾದ್ಯಂತ 51 ಸಾವಿರ ಶಿಕ್ಷಕರ ಕೊರತೆ ಇದ್ದು, ಶೀಘ್ರವೇ 32 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ 1 ನೇ ತರಗತಿ ಮಕ್ಕಳಿಗೆ ಗಣಕ ಯಂತ್ರ ತರಬೇತಿ ನೀಡಲಿದ್ದೇವೆ . ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ  ಅವಕಾಶ ನೀಡಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ಸಂಜೆ ವಿಶೇಷ ತರಗತಿ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನಿಂದ ಅನುಕೂಲವಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಚಿವ ಮಧು ಬಂಗಾರಪ್ಪ ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ ಎಂದಿದ್ದರು. ಇದೀಗ 32 ಸಾವಿರ ಶಿಕ್ಷಕರನ್ನ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

Key words: recruit, 32 thousand, teachers, Minister, Madhu Bangarappa