ಕಾಂಗ್ರೆಸ್ ಅವಧಿಯಲ್ಲಿ ಅಭಿವೃದ್ದಿ ಆಗಬಾರದೆಂದು ಟನಲ್ ರಸ್ತೆಗೆ ಬಿಜೆಪಿ ವಿರೋಧ-ಡಿಕೆ ಸುರೇಶ್

ಬೆಂಗಳೂರು,ನವೆಂಬರ್,5,2025 (www.justkannada.in): ಟನಲ್ ರಸ್ತೆ ಯೋಜನೆಗೆ ವಿರೋಧ ವ್ಯಕ್ತಪಡಿಸಿರುತ್ತಿರುವ ಬಿಜೆಪಿ ವಿರುದ್ದ ಮಾಜಿ ಸಂಸದ ಡಿ.ಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ಕಾಂಗ್ರೆಸ್ ಅವಧಿಯಲ್ಲಿ ಅಭಿವೃದ್ಧಿ ಕೆಲಸ ಆಗಬಾರದು ಎಂದು ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ. ಬೆಂಗಳೂರು ಅಭಿವೃದ್ಧಿ ಆಗುವುದು ಬಿಜೆಪಿಗೆ ಇಷ್ಟ ಇಲ್ಲ. ಸಂಸದ ತೇಜಸ್ವಿ ಸೂರ್ಯನ ಧ್ವನಿ ಕೇಂದ್ರದ ಮೇಲೆ ಇಲ್ಲ.  ಕಾಂಗ್ರೆಸ್ ಮೇಲೆ ಇದೆ. ಯಾವ ರಾಜ್ಯಕ್ಕೆ ಎಷ್ಟು ಶೇರಿಂಗ್ ಕೊಡ್ತಿದ್ದಾರೆ? ಎಂದು ಕಿಡಿಕಾರಿದರು.

ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಬಿಜೆಪಿ ಸರ್ಕಾರಕ್ಕಿಂತ ಹೆಚ್ಚಿನ ದರವನ್ನ ನಮ್ಮ ಸರ್ಕಾರ ನಿಗದಿ ಮಾಡುತ್ತದೆ ಎಂದರು.

Key words: BJP, opposes, tunnel road, Congress, DK Suresh