ಮಣ್ಣಲ್ಲಿ ಮಣ್ಣಾದ ಶಾಸಕ ಹೆಚ್.ವೈ.ಮೇಟಿ: ಅಂತ್ಯಕ್ರಿಯೆಯಲ್ಲಿ ಸಿಎಂ ಭಾಗಿ

ಬಾಗಲಕೋಟೆ,ನವೆಂಬರ್,4,2025 (www.justkannada.in):  ನಿನ್ನೆ ಅನಾರೋಗ್ಯದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಸಚಿವ ಹಾಗೂ ಶಾಸಕ ಹೆಚ್.ವೈ.ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಿನಲ್ಲಿ ನೆರವೇರಿತು.

ಬಾಗಲಕೋಟೆಯ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ತಂದೆ-ತಾಯಿ ಸಮಾಧಿಕಯ ಪಕ್ಕದಲ್ಲಿಯೇ ಕುರುಬ ಸಮುದಾಯದ ಸಂಪ್ರದಾಯದಂತೆ ಹೆಚ್ ವೈ ಮೇಟಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದ್ದರು.  ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಬೈರತಿ ಸುರೇಶ್, ಹೆಚ್.ಸಿ.ಮಹದೇವಪ್ಪ, ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಸೇರಿ ಹಲವರು ಭಾಗಿಯಾಗಿದ್ದರು.

Key words: Bagalkote, MLA, H.Y.Meti,  Funeral