ಬೆಳಗಾವಿ,ನವೆಂಬರ್,6,2025 (www.justkannada.in): ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಇಂದು 8ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ.
ಕಬ್ಬಿಗೆ ಬೆಂಬಲ ಬೆಲೆ 3500 ರೂ ನಿಗದಿ ಮಾಡುವಂತೆ ಆಗ್ರಹಿಸಿ ಕಳೆದ 8 ದಿನಗಳಿಂದಲೂ ರಾಜ್ಯದ ವಿವಿಧೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಸಚಿವ ಹೆಚ್.ಕೆ.ಪಾಟೀಲ್ ರೈತ ಮುಖಂಡರ ಜೊತೆ ಹೋರಾಟಗಾರರ ಜೊತೆ ಮಾತುಕತೆ ನಡೆಸಿದ್ದರು. ಆದರೆ ಸಚಿವರು ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇಂದೂ ಕೂಡ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಕೋರ್ಟ್ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜೆಯೊಳಗೆ ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಸರ್ಕಾರ ತಮ್ಮ ಬೇಡಿಕೆ ಈಡೇರಿಸದಿದ್ದರೆ, ನವೆಂಬರ್ 7ರಂದು ರಾಷ್ಟ್ರೀಯ ಹೆದ್ದಾರಿ ತಡೆಯುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
Key words: Farmers, Protest, continues, sugarcane price, fixing







