ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ಸರ್ಕಾರದ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು,ನವೆಂಬರ್,6,2025 (www.justkannada.iun): ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ  ಅನುಮತಿ ಪಡೆಯಬೇಕೆಂಬ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಮತ್ತೆ ಕಾನೂನು ಹೋರಾಟದಲ್ಲಿ ಹಿನ್ನೆಡೆಯಾಗಿದೆ.

ಸರ್ಕಾರಿ ಸ್ಥಳಗಳಲ್ಲಿಅನುಮತಿ ಇಲ್ಲದೆ ಸಭೆ ಸೇರಲು ನಿರ್ಬಂಧ ವಿಚಾರ ಸಂಬಂಧ ತಡೆ ತೆರವಿಗೆ ಮನವಿ ಮಾಡಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನ  ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದ್ದು ಈ ಮೂಲಕ ನಿರಾಕರಿಸಿದೆಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

ಸರ್ಕಾರಿ ಜಾಗದಲ್ಲಿ ಆರ್ ಎಸ್ಎಸ್ ಸೇರಿ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸಲು ಅನುಮತಿ ಪಡೆಯಬೇಕು ಎಂದು ಸರ್ಕಾರ ನಿರ್ಣಯ ಕೈಗೊಂಡಿತ್ತು. ಸರ್ಕಾರ ಈ ನಿರ್ಣಯ ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ಏಕಸದಸ್ಯ ಪೀಠದ ತಡೆ ತೆರವಿಗೆ ಮನವಿ ಮಾಡಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

Key words:  Restrictions, private organizations, activities, government, High Court