ನವದೆಹಲಿ,ನವೆಂಬರ್,6,2025 (www.justkannada.in): ರಾಜ್ಯದಲ್ಲಿ ಯಾವ ನವೆಂಬರ್, ಡಿಸೆಂಬರ್, ಜನವರಿ, ಫೆಬ್ರವರಿ ಕ್ರಾಂತಿ ಇಲ್ಲ. 2028ಕ್ಕೆ ಕ್ರಾಂತಿ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ. 2025, 2026ಕ್ಕೂ ಯಾವ ಕ್ರಾಂತಿಯೂ ಇಲ್ಲ. ಮುಂದಿನ ಬಾರಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಅಕಾಂಕ್ಷಿಗಳಿಗೆ ಏನ್ ಹೇಳಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ ಎಂದರು.
ಐದು ಹತ್ತು ಹೈದಿನೈದು ವರ್ಷ ಸಿಎಂ ಆಗಬೇಕೋ ಎಷ್ಟು ವರ್ಷ ಸಿಎಂ ಆಗಿರಬೇಕು ಎಂದು ಹೈಕಮಾಂಡ್ ತೀರ್ಮಾನಿಸುತ್ತೆ. ನಮಗೆ ಹೇಳಿದ ಕೆಲಸವನ್ನ ನಾವು ಮಾಡಿಕೊಂಡು ಹೋಗಬೇಕು ದೆಹಲಿಯಲ್ಲಿ ಯಾರನ್ನೂ ಭೇಟಿ ಮಾಡಲ್ಲ. ಪಕ್ಷ ಸಂಘಟನೆ ಬಗ್ಗೆ ಹೈಕಮಾಂಡ್ ನಾಯಕರ ಭೇಟಿಯಾಗುತೇನೆ ಪಕ್ಷದ ಚೌಕಟ್ಟು ಬಿಟ್ಟು ನಾನು ಹೋಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.
Key words: no November, revolution, 2028, DCM, DK Shivakumar







