ಬೆಂಗಳೂರು,ನವೆಂಬರ್,7,2025 (www.justkannada.in): ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಬೆಳಗಾವಿ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಈ ಕುರಿತು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಕೇಂದ್ರ ಸರ್ಕಾರ ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು. ನಾನೊಬ್ಬ ಕಬ್ಬಿನ ದರ ನಿರ್ಧಾರ ಮಾಡಲು ಸಾಧ್ಯವಿಲ್ಲ. ಬೆಲೆ ನಿಗದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಾರೆ ಎಂದರು.
Key words: Sugarcane price, Minister, Sathish Jarkiholi







