ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: 3300 ರೂ. ನೀಡಲು ನಿರ್ಧಾರ

ಬೆಂಗಳೂರು,ನವೆಂಬರ್,7,2025 (www.justkannada.in):  ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ  ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ  3,300 ರೂ ನೀಡಲು ನಿರ್ಧರಿಸಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರೈತರು ಮತ್ತು ಕಾರ್ಖಾನೆ ಮಾಲೀಕರ  ಜೊತೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.  ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ದರ ನಿಗದಿ ಮಾಡಲು ನಿರ್ಧರಿಸಿದೆ. ಸರ್ಕಾರದಿಂದ 50 ರೂಪಾಯಿ ಹಾಗೂ ಕಾರ್ಖಾನೆಯಿಂದ 50 ರೂಪಾಯಿ ನೀಡಲಾಗುವುದು. ಈ ಮೂಲಕ ಒಟ್ಟು 3300 ರೂಪಾಯಿ ನೀಡಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬೆಳಗಾವಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು.  ನಂತರ ಸಿಎಂ ಸಿದ್ದರಾಮಯ್ಯ ನಿರಂತರ ಸಭೆ ನಡೆಸಿದ್ದು ಇದೀಗ ಪ್ರತಿ ಟನ್  ಕಬ್ಬಿಗೆ 3300 ರೂ ನಿಗದಿಪಡಿಸಿದ್ದಾರೆ.

Key words: Government, sugarcane, Rs. 3300, farmers, Decision