ಬೆಂಗಳೂರು,ನವೆಂಬರ್,8,2025 (www.justkannada.in): ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಹೃದಯಾಘಾತವಾಗಿದ್ದು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸತ್ಯನಾರಾಯಣ ರಾವ್ ಗಾಯಕ್ವಾಡ್ (84) ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬಂದ ನಟ ರಜನಿಕಾಂತ್ ಅವರು ಖುದ್ದು ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರನ್ನು ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಿದ್ದಾರೆ.
ನಾರಾಯಣ ಹೃದಯಾಲಯದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯನಾರಾಯಣ ರಾವ್ ಅವರಿಗೆ ಹೃದಯಾಘಾತ ಆಗಿರುವರಿಂದ ರಜನಿಕಾಂತ್ ಅವರ ಕುಟುಂಬದಲ್ಲಿ ಆತಂಕ ಮೂಡಿದೆ.
Key words: Actor, Rajinikanth, brother, heart attack, admitted, hospital







