ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ಸುಪ್ರೀಂನಲ್ಲಿ ಮತ್ತೆ ವಜಾ

ನವದೆಹಲಿ,ನವೆಂಬರ್,8,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮರುಪರಿಶೀಲಿಸುವಂತೆ ಕೋರಿ ಮೊದಲ ಆರೋಪಿ ಪವಿತ್ರಾಗೌಡ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಪ್ರಕರಣ ಸಂಬಂಧ ಆರೋಪಿಗಳಿಗೆ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಆಗಸ್ಟ್ ನಲ್ಲಿ ರದ್ದುಗೊಳಿಸಿತ್ತು. ಈ ಆದೇಶವನ್ನ ಮರುಪರಿಶೀಲಿಸುವಂತೆ ಕೋರಿ ಪವಿತ್ರಾಗೌಡ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರುಉ.

ಇದೀಗ ಪವಿತ್ರಾಗೌಡ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ. ತೀರ್ಪು ದಾಖಲೆಗಳನ್ನ ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ಮಾಡುವ ಅಗತ್ಯವಿಲ್ಲ  ಎಂದು ನ್ಯಾಯಪೀಠ ಹೇಳಿದೆ.

Key words: Pavithra Gowda,  bail, plea, dismissed, Supreme Court