ರೈತರ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ: 11ಮಂದಿ ವಿರುದ್ದ ‍FIR

ಬೆಳಗಾವಿ,ನವೆಂಬರ್,8,2025 (www.justkannada.in):  ಕಬ್ಬಿನ ದರ ನಿಗದಿಗೆ ಆಗ್ರಹಿಸಿ ನಿನ್ನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಬಳಿ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ 11 ಮಂದಿ ವಿರುದ್ದ ಎಫ್ ಐಆರ್ ದಾಖಲಾಗಿದೆ.

ಪಿಎಸ್ ಐ ಆರ್ ವಿ ಪಾಟೀಲ್ ನೀಡಿದ ದೂರಿನನ್ವಯ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ  11 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ನಿನ್ನೆ ಪ್ರತಿಭಟನೆ ವೇಳೆ ಪೊಲೀಸರನ್ನ ಕೊಲೆ ಮಾಡುವ ಉದ್ದೇಶದಿಂಧ ಕಲ್ಲ ತೂರಾಟ ಮಾಡಿ ಒದ್ದು ಹಲ್ಲೆ ಮಾಡಿ ತೀವ್ರ ಗಾಯಗೊಳಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಘಟನೆಯಲ್ಲಿ 100 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದೆ. ಸಾರ್ವಜನಿಕ ಆಸ್ತಿ ನಷ್ಟವಾಗಿದೆ.  2 ಪೋಲಿಸ್ ವ್ಯಾನ್ 4 ಬಸ್ ಗಳಿಗೂ ಹಾನಿ ಮಾಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.  ಕಲ್ಲು ತೂರಾಟ ಮಾಡಿರುವ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ  ಮಾಡಲಾಗಿದ್ದು, ಸಿಸಿಟಿವಿ ಮೊಬೈಲ್  ಪರಿಶೀಲನೆ  ನಡೆಸುತ್ತಿದ್ದಾರೆ.

Key words: Belgaum, Stones, pelted, farmers, protest, FIR