ಬೆಂಗಳೂರು,ನವೆಂಬರ್,10,2025 (www.justkannada.in): ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇದನ್ನ ಗಂಭೀರವಾಗಿ ಪರಿಗಣಿಸಿದ್ದು ಸೂಕ್ತ ಕ್ರಮಕ್ಕೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರ ಇಂತಹ ಚಟುವಟಿಕೆಗಳನ್ನ ಯಾವುದೇ ಕಾರಣಕ್ಕೂ ಸಹಿಸಲ್ಲ. ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಸೂಕ್ತ ತನಿಖೆ ಬಳಿಕ ತಪ್ಪಿತಸ್ಥರನ್ನು ಅಮಾನತು ಮಾಡಲಾಗುವುದು. ಅದಕ್ಕಾಗಿಯೇ ನಾವು ಸಭೆ ಕರೆದಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
Key words: Illegal activity, jail, appropriate action, Home Minister, Parameshwar







