Thursday, August 13, 2026

BDA Apartments

Home Front Page ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆ ಆಲಿಸಬೇಕು- ಸಿಎಂ ಸಿದ್ದರಾಮಯ್ಯ ಸ್ಪಷ್ಟ ನಿರ್ದೇಶನ

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆ ಆಲಿಸಬೇಕು- ಸಿಎಂ ಸಿದ್ದರಾಮಯ್ಯ ಸ್ಪಷ್ಟ ನಿರ್ದೇಶನ

ಮೈಸೂರು,ನವೆಂಬರ್,11,2025 (www.justkannada.in): ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ವಾಸ ಮಾಡಬೇಕು. ಕಚೇರಿಯಲ್ಲಿದ್ದು ಜನರ ಸಮಸ್ಯೆ ಆಲಿಸಬೇಕು ಎಂದು ನಿನ್ನೆ ನಡೆದ ಕೆಡಿಪಿ ಸಭೆಯಲ್ಲಿ ಸ್ಪಷ್ಟ ನಿರ್ದೇಶನ ನೀಡಿದ್ದೇನೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಸೂರಲ್ಲಿ ನಿನ್ನೆ ಕೆಡಿಪಿ ಸಭೆ ಮಾಡಿದ್ದೇನೆ. ಕಳೆದ ಆರು‌ ತಿಂಗಳ ಬಳಿಕ ಸಭೆ ಮಾಡಿದೆ. ನಿರಂತರ 10 ಗಂಟೆಗಳ ಕಾಲ ಅಧಿಕಾರಿಗಳ ಜೊತೆ ಸಭೆ ನಡೆಯಿತು. ನಾನು ಬೆಂಗಳೂರಲ್ಲಿ‌ರಲಿ, ಎಲ್ಲೇ ಇರಲಿ ಸಮಸ್ಯೆ ಹೊತ್ತು ನೂರಾರು ಜನ ಬರುತ್ತಾರೆ. ಕಾರ್ಯಕ್ರಮಕ್ಕೆ ಹೋಗುವುದಿದ್ದರೆ ದಿನವಿಡಿ ಕಾದಿರುತ್ತಾರೆ. ರಾತ್ರಿ 9 ಗಂಟೆಗೆ ಬ‌ಂದರೂ ಕಾಯುತ್ತಿರುತ್ತಾರೆ. ಬಹುತೇಕ ಜನರ ಸಮಸ್ಯೆಗಳು ಸ್ಥಳೀಯ ಮಟ್ಟದಲ್ಲೇ ಇತ್ಯರ್ಥವಾಗುತ್ತವೆ. ಹೆಚ್ಚಾಗಿ ಕೃಷಿ ಇಲಾಖೆಗೆ ಸಂಬಂಧಿಸಿದ್ದೇ ಇರುತ್ತದೆ. ಪಹಣಿ, ಪೋಡಿ ಸೇರಿ ಹಲವು ಕಾರ್ಯಗಳಿಗೆ ವಿಚಾರಗಳು ಇರುತ್ತದೆ. ವೈಯಕ್ತಿಕ ಕಾರಣ ಇಟ್ಟುಕೊಂಡು ಬರುವುದು ಕಡಿಮೆ. ಪೊಲೀಸ್ ಇಲಾಖೆಯ ಹಲವು ಸಮಸ್ಯೆಗಳು ಜನರನ್ನ ಕಾಡುತ್ತವೆ. ಈ ಕಾರಣಕ್ಕೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿರುವೆ.

ಅಧಿಕಾರಿಗಳು ಜನರನ್ನ ಭೇಟಿ ಮಾಡಬೇಕು. ಕಚೇರಿಯಲ್ಲಿದ್ದು ಜನರ ಸಮಸ್ಯೆ ಆಲಿಸಬೇಕು. ಕಾನೂನು ರೀತಿ ಅಗತ್ಯಕ್ರಮ ಕೈಗೊಳ್ಳಬೇಕು. ಅನಗತ್ಯವಾಗಿ ಜನರನ್ನ ಅಲಿಸುವುದು ದೊಡ್ಡ ಅಪರಾಧ. ಜನರೇ ಪ್ರಜಾಪ್ರಭುತ್ವದಲ್ಲಿ ಪ್ರಭುಗಳು. ಜನರಿಗೆ ಈ ಕುರಿತು ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದರು.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ವಾಸ ಮಾಡಬೇಕು. ಕೆಲವರು ಕೇಂದ್ರ ಸ್ಥಾನದಲ್ಲಿ ವಾಸ ಮಾಡುತ್ತಿಲ್ಲ. ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಕ್ಕೆ ಹೋಗುತ್ತಾರೆ. ಇದು ಸರಿಯಾದ ಪದ್ಧತಿಯಲ್ಲ ಎಂದು  ಗ್ರಾಪಂ ಪಿಡಿಓ, ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳಿಗೆ ವಾರ್ನಿಂಗ್  ನೀಡಿರುವುದಾಗಿ ತಿಳಿಸಿದರು.

ತಾಲೂಕು ಕೇಂದ್ರದಲ್ಲಿ ವಾಸ ಮಾಡುವ ಅಧಿಕಾರಿಗಳ ವರದಿ ಕೇಳಿದ್ದೇನೆ. ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

Key words: Officials, listen, people’s, problems, CM, Siddaramaiah