ಕಾರು ಬಾಂಬ್ ಸ್ಫೋಟದ ಹಿಂದಿರುವವರ ವಿರುದ್ದ ಕಠಿಣ ಕ್ರಮ: ನ್ಯಾಯದ ಕಟಕಟೆಗೆ ನಿಲ್ಲಿಸುತ್ತೇವೆ- ಪ್ರಧಾನಿ ಮೋದಿ

ನವದೆಹಲಿ,ನವೆಂಬರ್,11,2025 (www.justkannada.in): ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ ಹಲವು ಮಂದಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೆಹಲಿ ಬಾಂಬ್ ಸ್ಫೋಟದ ಹಿಂದೆ ಇರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನ್ಯಾಯದ ಕಟಕಟೆಗೆ ತಂದು ನಿಲ್ಲಿಸುತ್ತೇವೆ ಎಂದಿದ್ದಾರೆ.

ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಈ ಕುರಿತು ಮಾತನಾಡಿ, ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭಯಾನಕ ಘಟನೆ ಎಲ್ಲರಿಗೂ ತೀವ್ರ ದುಃಖ ತಂದಿದೆ. ಸಂತ್ರಸ್ತ ಕುಟುಂಬಗಳ ದುಃಖವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇಡೀ ದೇಶ ಇಂದು ಅವರೊಂದಿಗೆ ನಿಂತಿದೆ ಎಂದರು.

ಕಾರು ಬಾಂಬ್ ಸ್ಫೋಟದ ಹಿಂದಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದರ ಹಿಂದಿನ ಸಂಚುಕೋರರನ್ನು ಬಿಡುವುದಿಲ್ಲ. ಇದಕ್ಕೆ ಕಾರಣರಾದವರೆಲ್ಲರನ್ನೂ ನ್ಯಾಯದ ಕಟಕಟೆಗೆ ತರಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Key words: car bomb blasts, Strict action, PM, Modi