ಬೆಂಗಳೂರು,ನವೆಂಬರ್,11,2025 (www.justkannada.in): ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮವಾಗುತ್ತದೆ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ ನೀಡಿದೆ.
ಹಿಂದುಳಿದ ಜಾತಿಗಳ ಒಕ್ಕೂಟದಿಂದ ನವೆಂಬರ್ 19 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದ್ದು ಅಹಿಂದ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ . ಹಾವನೂರು ವರದಿಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು ಈ ಕುರಿತು ಮಾತನಾಡಿ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಮಾಹಿತಿ ನೀಡಿದರು.
ಎಲ್ ಜಿ ಹಾವನೂರು ವರದಿಗೆ 50 ವರ್ಷ ತುಂಬಿದೆ ಸುವರ್ಣ ಮಹೋತ್ಸವದ ಅಂಗವಾಗಿ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನವೆಂಬರ್ 19ರಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಸಮಾವೇಶವನ್ನ ಉದ್ಘಾಟಿಸಲಿದ್ದಾರೆ. ಅಹಿಂದ ವರ್ಗದ ಸಚಿವರು ಶಾಸಕರು ಮುಖಂಡರು ಭಾಗಿಯಾಗಲಿದ್ದಾರೆ ಎಂದರು.
ಹಾಗೆಯೇ ಜಾತಿಗಣತಿ ಮರು ಸಮೀಕ್ಷೆಗೆ ವಿರೋಧ ಮಾಡಿದರೆ ದಂಗೆ ಏಳುತ್ತೇವೆ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಕಾಂಗ್ರೆಸ್ ನಿರ್ನಾಮ ಆಗಲಿದೆ. ಅಹಿಂದ ಬೆಂಬಲ ಇರುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ. ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸುಲಭವಲ್ಲ. ಎಂದು ಎಚ್ಚರಿಕೆ ನೀಡಿದರು.
Key words: Backward Castes Alliance, warns, Congress, Siddaramaiah, CM post







