ಸರ್ಕಾರದ ದರ ಒಪ್ಪದ ರೈತರು: ಕಬ್ಬಿಗೆ 3500 ರೂ.ಗೆ ಆಗ್ರಹಿಸಿ ಮುಂದುವರೆದ ಪ್ರತಿಭಟನೆ

ಬಾಗಲಕೋಟೆ,ನವೆಂಬರ್,12,2025 (www.justkannada.in):  ಒಂದು ಟನ್ ಕಬ್ಬಿಗೆ 3300 ರೂ. ನಿಗದಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನ ಒಪ್ಪದ ಕಬ್ಬು ಬೆಳಗಾರರು ಬಾಗಲಕೋಟೆಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ.

ಟನ್ ಕಬ್ಬಿಗೆ 3500 ರೂಪಾಯಿ ನೀಡಲೇಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಜಂಬಿಗಿ ಕ್ರಾಸ್ ಬಳಿ ರೈತರು ಧರಣಿ ನಡೆಸುತ್ತಿದ್ದು ವಿಜಯಪುರ-ಬೆಳಗಾವಿ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರಿಂದ ರಸ್ತೆ ತಡೆ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದು,ರೈತರು  ಗ್ರಾಮೀಣ ಭಾಗದ ಎಲ್ಲಾ ರಸ್ತೆಗಳನ್ನು ಬಂದ್ ಮಾಡುತ್ತಿದ್ದಾರೆ.

ಹಿಂದಿನ ವರ್ಷಗಳ ಕಬ್ಬಿನ ಬಾಕಿ ಬಿಲ್ ಪಾವತಿಸಬೇಕು. ಪ್ರಸಕ್ತ ವರ್ಷ ಸರ್ಕಾರ ನಿಗದಿಪಡಿಸಿರುವ ಅವೈಜ್ಞಾನಿಕ ಹಾಗೂ ರೈತರಿಗೆ ಮಾರಕವಾಗಿರುವ ಬೆಲೆಯನ್ನು ನಾವು ಒಪ್ಪವುದಿಲ್ಲ. ನಮಗೆ ನ್ಯಾಯುತ ಬೆಲೆ ನೀಡಬೇಕು ಎಂದು ಆಗ್ರಹಿಸಿ  ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಜೆ 4.30 ರಿಂದ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿದ್ದರು. ಮಂಗಳವಾರ ಬೆಳಿಗೆ 7 ಗಂಟೆ ಸುಮಾರಿಗೆ ನಗರದ ಹತ್ತಿರದ ಮಹಾಂಗಪುರ ಬೈಪಾಸ್ ರಸ್ತೆಯಲ್ಲಿ ಕಬ್ಬು ತುಂಬಿದ ಲಾರಿ ಚಕ್ರದ ಗಾಳಿ ತಗೆದು ನೆಲಕ್ಕೆ ಉರುಳಿಸಿದ್ದಾರೆ.

Key words: Farmers, protest, Rs. 3500,  sugarcane