ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜ.8ಕ್ಕೆ ಮುಂದೂಡಿದ ಕೋರ್ಟ್

ಬೆಂಗಳೂರು,ನವೆಂಬರ್,12,2025 (www.justkannada.in):  ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಜನವರಿ 8ಕ್ಕೆ ಮುಂದೂಡಿಕೆ ಮಾಡಿದೆ.

ಮುಡಾ ಸೈಟ್ ಹಂಚಿಗೆ ಪ್ರಕರಣದ ತನಿಖೆಗೆ ರಾಜಪಾಲರು ಅನುಮತಿ ನೀಡಿದ್ದರು. ಈ ಆದೇಶವನ್ನು ಹೈಕೋರ್ಟ್ ಏಕ ಸದಸ್ಯ ಪೀಠದ ಎತ್ತಿ ಹಿಡಿದಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು  ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪರ ವಕೀಲರ ಮನವಿಯ ಮೇರೆಗೆ ಜನವರಿ 8 ಕ್ಕೆ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮುಂದೂಡಿತು.

Key words: Muda case, CM Siddaramaiah, hearing, postponed