ಭೀಕರ ಅಪಘಾತಕ್ಕೆ  ಮೂವರು ಬಲಿ

ಬಾಗಲಕೋಟೆ,,ನವೆಂಬರ್,13,2025 (www.justkannada.in): ಬೈಕ್ ಪಾದಚಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡದಲ್ಲಿ ಈ ಘಟನೆ ನಡೆದಿದೆ. ಗಣಪತಿ ಬತ್ತಿ (32) ಹಾಗೂ ತಾಪಸ್ ಕುಮಾರ್ (46) ಮತ್ತು ಪಾದಾಚಾರಿ ಮೃತಪಟ್ಟವರು ಎಂದು ತಿಳಿದುಬಂದಿದೆ.  ಪೊಲೀಸರು ಮೃತ ಪಾದಚಾರಿಯ ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಕಾರು ಚಾಲಕ ಸುಭಾಷ್ ರಾಮತೀರ್ಥಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಬೈಕ್ ಮತ್ತು ಪಾದಚಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ.

Key words: Three, death, horrific, accident