ಮೇಕೆದಾಟು ಯೋಜನೆ: ಕಾನೂನು ಹೋರಾಟದಲ್ಲಿ ನ್ಯಾಯ- ಡಿಸಿಎಂ ಡಿಕೆಶಿ ಸಂತಸ

ಬೆಂಗಳೂರು,ನವೆಂಬರ್,13,2025 (www.justkannada.in): ಮೇಕೆದಾಟು ಯೋಜನೆಗೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾನೂನು ಹೋರಾಟದಲ್ಲಿ ನಮಗೆ ನ್ಯಾಯ ಸಿಕ್ಕಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆ ಕಾನೂನು ಹೋರಾಟದಲ್ಲಿ ಸುಪ್ರೀಂಕೋರ್ಟ್ ನಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ. ಮೇಕೆದಾಟು ನಮ್ಮ ನೀರು, ನಮ್ಮ ಹಕ್ಕು ಯೋಜನೆ ಎಂದರು.

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಲಾಭವಾಗಲಿದೆ. ನಾವು ತಮಿಳುನಾಡಿಗೆ ಯಾವುದೇ ಅಡ್ಡಿ ಮಾಡುತ್ತಿಲ್ಲ. ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ. ನ್ಯಾಯಾಲಯಗಳ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರು ಪಡೆಯಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: Mekedatu project, Justice, legal battle, DCM DK shivakumar