ಇಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,15,2025 (www.justkannada.in): ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಸಂಜೆ 5.30ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ  ಜೊತೆ ಭೇಟಿಗೆ ಸಮಯ ನಿಗದಿಯಾಗಿದೆ. ಭೇಟಿ ವೇಳೆ ರಾಜ್ಯದ ಜಲ ಯೋಜನೆಗಳು ಕಬ್ಬುಬೆಳೆಗಾರರ ಸಮಸ್ಯೆ,  ಯೋಜನೆಗಳಿಗೆ ಅನುಮತಿ ನೀಡುವ ಬಗ್ಗೆ ಹಾಗೂ  ಕಬ್ಬು ಬೆಳಗೆಗಾರರ ಸಮಸ್ಯೆ ಇತ್ಯರ್ಥಪಡಿಸುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಕಪಿಲ್ ಸಿಬಲ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೂ ಸಿಎಂ ಸಿದ್ದರಾಮಯ್ಯ ಸಮಯ ಕೇಳಿದ್ದು ಅವಕಾಶ ಸಿಕ್ಕರೆ ಸೋಮವಾರ ಮತ್ತೆ ದೆಹಲಿಗೆ ತೆರಳಲು ಚಿಂತನೆ ನಡೆಸಿದ್ದಾರೆ. ಈ ನಡುವೆ ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆ ಇದೆ.   ಸಿಎಂ ಸಿದ್ದರಾಮಯ್ಯ ಜೊತೆಗೆ ಡಿಕೆ ಶಿವಕುಮಾರ್ ಸಚಿವರಾದ ಹೆಚ್.ಸಿ ಮಹದೇವಪ್ಪ ಕೆ.ಜೆ ಜಾರ್ಜ್ ಸಹ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Key words: CM, Siddaramaiah, Delhi, today