ಮೃಗಾಲಯದಲ್ಲಿ 28 ಕೃಷ್ಣಮೃಗಗಳು ನಿಗೂಢ ಸಾವು

ಬೆಳಗಾವಿ,ನವೆಂಬರ್,15,2025 (www.justkannada.in):  28 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲ್ಲೂಕಿನ ಭುತರಾಮನಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ನಡೆದಿದೆ.

ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ 38  ಕೃಷ್ಣಮೃಗಗಳ ಪೈಕಿ 28 ಕೃಷ್ಣಮೃಗಗಳು ಸಾವನ್ನಪ್ಪಿವೆ. ನವೆಂಬರ್ 13 ರಂದು 8 ಇಂದು 20 ಕೃಷ್ಣಮೃಗಗಳು ಮೃತಪಟ್ಟಿದ್ದು ಮಾರಣಾಂತಿಕ ಬ್ಯಾಕ್ಟೀರಿಯಾದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಏಕಾಏಕಿ ಕೃಷ್ಣಮೃಗಗಳ ಸಾವಿನಿಂದ ಜನರು ಬೆಚ್ಚಿಬಿದ್ದಿದ್ದಾರೆ.

Key words: 28 blackbucks, die ,mysteriously , zoo