ಬೆಂಗಳೂರು, ನವೆಂಬರ್,15,2025 (www.justkannada.in): ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಯುವಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂಪಾರ್ಕ್ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಫ್ರೀಡಂಪಾರ್ಕ್ ಬಳಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದು ಮತಗಳ್ಳತನ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಕುಳಿತು, ಬ್ಯಾರಿಕೇಡ್ ಹತ್ತಿ ಪ್ರತಿಭಟನೆ ಮುಂದಾದ ಕಾರ್ಯಕರ್ತರನ್ನ ಪೊಲೀಸರು ತಡೆದಿದ್ದು ಈ ನಡುವೆ ಪೊಲೀಸರು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.
ಪ್ರತಿಭಟನಾನಿರತ ಯೂತ್ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಚುನಾವಣಾ ಆಯೋಗ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದು ಈ ವೇಳೆ ಪೊಲೀಸರು ಅವರನ್ನ ವಶಕ್ಕೆ ಪಡೆದರು.
Key words: Vote, rigging, allegations, Youth Congress, protests, police, custody







