ನವದೆಹಲಿ, ನವೆಂಬರ್,15, 2025 (www.justkannada.in): ನವದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.
ರಾಹುಲ್ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಸುಮಾರು 30 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ಪುನರಚನೆ ಕುರಿತು ಚರ್ಚೆಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಸಚಿವ ಕೆ.ಜೆ ಜಾರ್ಜ್ ಸಾಥ್ ನೀಡಿದ್ದಾರೆ.
ರಾಹುಲ್ ಗಾಂಧಿ-ಸಿಎಂ ಸಿದ್ದರಾಮಯ್ಯ ಭೇಟಿ ಅಂತ್ಯವಾದ ಬೆನ್ನಲ್ಲೆ ಡಿಸಿಎಂ ಡಿಕೆ ಶಿವಕುಮಾರ್ ಸಹ ದೆಹಲಿಗೆ ತೆರಳಿದ್ದು ಅವರು ಸಹ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಚರ್ಚಿಸುವ ಸಾಧ್ಯತೆ ಇದೆ. ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಸಂಜೆ 5.30ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ ಭೇಟಿ ರದ್ದಾಗಿದೆ.
Key words: CM, Siddaramaiah, met, discussed, Rahul Gandhi







