ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್..?

ಬೆಂಗಳೂರು,ನವೆಂಬರ್,15,2025 (www.justkannada.in):  ಇಂದು  ದೆಹಲಿಗೆ ತೆರಳಿರುವ   ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು ಈ ವೇಳೆ ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿ ಅವರ ಜೊತೆ ಸಿಎಂ ಸಿದ್ಧರಾಮಯ್ಯ 30 ನಿಮಿಷಗಳ ಕಾಲ ಚರ್ಚೆ ನಡೆಸಿದ್ದು, ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಅವರ ಜೊತೆಗೆ ಚರ್ಚಿಸಿ ಪುನಾರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಅಂತೆಯೇ ರಾಹುಲ್ ಗಾಂಧಿ ಅವರು ರಾಜ್ಯ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ.

Key words: Green signal, state cabinet, Restructure