ಇಂದು ಮತ್ತೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

ನವದೆಹಲಿ, ನವೆಂಬರ್,17,2025 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮತ್ತೆ ದೆಹಲಿ ಪ್ರವಾಸ ಕೈಗೊಂಡಿದ್ದು ಮಧ್ಯಾಹ್ನ 1 ಗಂಟೆ ವೇಳೆಗೆ ದೆಹಲಿ ತಲುಪಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದ್ದ ಸಿಎಂ ಸಿದ್ದರಾಮಯ್ಯ ವಾಪಸ್ ಆಗಿದ್ದರು. ಇದೀಗ ಇಂದು ಮತ್ತೆ ದೆಹಲಿಗೆ ತೆರಳುತ್ತಿದ್ದು ಮಧ್ಯಾಹ್ನ 3 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ ರಾಜ್ಯದ ಅಭಿವೃದ್ದಿ ಕಾರ್ಯ, ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Key words; CM, Siddaramaiah, Delhi, today