ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚಿಸಿದ ಡಿಸಿಎಂ ಡಿಕೆ ಶಿವಕುಮಾರ್

ನವದಹಲಿ, ನವೆಂಬರ್,17,2025 (www.justkannada.in):  ನವದೆಹಲಿಯಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು 50 ನಿಮಿಷಗಳ ಕಾಲ ಚರ್ಚಿಸಿದ್ದಾರೆ ಎನ್ನಲಾಗಿದೆ. ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ಕರ್ನಾಟಕದಲ್ಲಿ ಸಂಪುಟ ಪುನಾರಚನೆ ಮತ್ತು ಯಾವುದೇ ರಾಜಕೀಯ ಚಟುವಟಿಕೆಗಳು ಗರಿಗೆದರಿಲ್ಲ. ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗಿದ್ದು ಪಕ್ಷದ ಸಾಮಾನ್ಯ ವಿಚಾರಗಳ ಬಗ್ಗೆ ಚರ್ಚಿಸಲು ಹೊರತು ಯಾವುದೇ ವಿಶೇಷ ಕಾರಣಗಳಿಗಲ್ಲ. ‘ಕಾಂಗ್ರೆಸ್ ಪಕ್ಷ ಇದ್ದರೆ ಮಾತ್ರ ನಾವು ಎಲ್ಲರೂ’ ಎಂದರು.

ಈ ನಡುವೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೊರಟಿದ್ದು ಸಂಜೆ 5 ಗಂಟೆಗೆ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕಬ್ಬು ಬೆಳೆಗಾರರ ಸಮಸ್ಯೆಗಳು, ಬೆಳೆ ಹಾನಿ ಪರಿಹಾರ ಮತ್ತು ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲಿದ್ದಾರೆ.

Key words: DCM, DK Shivakumar, meets, Mallikarjun Kharge ,discusses