ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಮತ್ತೆ ಪ್ರಮಾಣ ವಚನಕ್ಕೆ ದಿನಾಂಕ ಫಿಕ್ಸ್

ಪಾಟ್ನಾ,ನವೆಂಬರ್,17,2025 (www.justkannada.in):  ಬಿಹಾರ ವಿಧಾನಸಭೆ ಚುನಾವಣೆಯಲ್ಲಿ  ಜೆಡಿಯು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 202 ಸ್ಥಾನ ಗೆದ್ದು ಅಧಿಕಾರಕ್ಕೆ  ಸಿದ್ದತೆ ನಡೆಸುತ್ತಿದ್ದು ಈ ಮಧ್ಯೆ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯಪಾಲರಿಗೆ  ನಿತೀಶ್ ಕುಮಾರ್ ತಮ್ಮ ರಾಜೀನಾಮೆಯನ್ನ ಸಲ್ಲಿಸಿದ್ದು,  ನವೆಂಬರ್ 20ರಂದು ಮತ್ತೆ ಬಿಹಾರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 10ನೇ ಬಾರಿಗೆ ಬಿಹಾರ ರಾಜ್ಯದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ .

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿದೆ. ರಾಜಭವನದಲ್ಲಿ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಕೆ ಮಾಡಿದ್ದು, ನ.19 ರಂದು ವಿಧಾನಸಭೆ ವಿಸರ್ಜನೆಗೊಳ್ಳಲಿದೆ.ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ, ಬಿಹಾರ ಸಚಿವ ಸಂಪುಟ ಸೋಮವಾರ ವಿಧಾನಸಭೆಯನ್ನು ವಿಸರ್ಜಿಸುವ ಪ್ರಸ್ತಾವನೆಯನ್ನು ಅಂಗೀಕರಿಸಿತು.

ಎನ್‌ಡಿಎ 202 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಪೈಕಿ ಬಿಜೆಪಿ 89, ಜೆಡಿಯು ಗಲುವು 85, ಲೋಕ ಜನಶಕ್ತಿ ಪಾರ್ಟಿ (ಎಲ್‌ಜೆಪಿ)ಗೆಲುವು 19, ಹಿಂದುಸ್ತಾನಿ ಅವಾಮ್ ಮೋರ್ಚಾ (HAMS) ಗೆಲುವು 5, ರಾಷ್ಟ್ರೀಯ ಲೋಕ ಮೋರ್ಚಾ ಗೆಲುವು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

Key words: Nitish Kumar, resigns, Bihar CM