ಪ್ರಧಾನಿ ಮೋದಿ ಭೇಟಿ: 5 ವಿಷಯಗಳ ಬಗ್ಗೆ ಚರ್ಚಿಸಲಾಗಿದೆ- ಸಿಎಂ ಸಿದ್ದರಾಮಯ್ಯ

ನವದೆಹಲಿ,ನವೆಂಬರ್,17,2025 (www.justkannada.in): ಇಂದು ದೆಹಲಿ ಪ್ರವಾಸಕ್ಕೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವುರ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಇಂದು ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿ ರಾಜ್ಯದ ವಿಚಾರಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ರಾಜ್ಯದಲ್ಲಿ ಬೆಳೆಹಾನಿ, ರೈತರ ಸಂಕಷ್ಟ ಸೇರಿದಂತೆ ಐದು ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದ್ದೇವೆ. ರಾಜ್ಯದಲ್ಲಿ ಒಟ್ಟು 14,58,000 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಬೆಳೆಹಾನಿ ಬಗ್ಗೆ ನಾವು ಜಂಟಿ ಸಮೀಕ್ಷೆ ನಡೆಸಿದ್ದೇವೆ. ರಾಜ್ಯದಲ್ಲಿ 3560 ಕೋಟಿ ನಷ್ಟವಗಿದೆ. ಮಳೆಯಿಂದಾಗಿ ಮೂಲಸೌಕರ್ಯಗಳಿಗೂ ಹಾನಿಯಾಗಿದೆ ಎಂದು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ರಾಜ್ಯ ಸರ್ಕಾರವೂ ಬೆಳೆಹಾನಿ ಪರಿಹಾರ ಕೊಡುತ್ತಿದೆ. ರೈತರಿಗೆ ಕೊಡಬೇಕಾದ ಪರಿಹಾರ 2,800 ಕೋಟಿಯಾಗುತ್ತದೆ ಎಂದು ತಿಳಿಸಿದ್ದೇವೆ ಎಂದರು.

ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಮೋದಿ ಅವರಿಗೆ ಮನವರಿಕೆ ಮಾಡಿದ್ದೇವೆ.  ಎಫ್ ಆರ್ ಪಿ ನಿಗದಿ ಮಾಡುವವರು ಕೇಂದ್ರ ಸರ್ಕಾರ . ಪ್ರತಿಟನ್ ಕಬ್ಬಿಗೆ 3,500 ರೂ. ಕೊಡಬೇಕು ಎಂದು ರೈತರ ಬೇಡಿಕೆ ಇದೆ. ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ರೈತ ಮುಖಂಡರು ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ 3,300 ರೂ ನಿಗದಿ ಮಾಡಿದ್ದೇವೆ. ಬಳಿಕ ರೈತರು ಪ್ರತಿಭಟನೆ ಕೈಬಿಟ್ಟರು.  ಹೀಗಾಗಿ ಕಬ್ಬುಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: PM Modi, meeting, 5 issues, discussed, CM Siddaramaiah