ಬೆಂಗಳೂರು, ನವೆಂಬರ್, 18,2025 (www.justkannada.in): ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರೆಲ್ಲರ ಬೆಂಬಲಕ್ಕೆ ನಿಂತಿದ್ದೇವೆ. 60 ದೇಶಗಳ ಪ್ರತಿನಿಧಿಗಳು, ದೇಶದ ಎಲ್ಲಾ ರಾಜ್ಯಗಳ ಪ್ರಮುಖರು ಸುಮಾರು 50 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 1,500 ದೊಡ್ದ ಕಂಪೆನಿಗಳು ಭಾಗವಹಿಸುತ್ತಿವೆ. ನಮ್ಮನ್ನ ನಂಬಿ ಬಂದವರಿಗೆ ಅವಕಾಶ ಕೊಡುವುದು ನಮ್ಮ ಕೆಲಸ. ಉದ್ಯಮಿಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗುವುದು ಎಂದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ಕ್ಷೇತ್ರಗಳಿಗೆ ಅದರದೇ ಆದ ನೀತಿ ರೂಪಿಸಿ, ಪ್ರೋತ್ಸಾಹ ನೀಡುತ್ತಿದೆ. ರಸ್ತೆಗಳ ದುರಸ್ತಿ ಕಾರ್ಯಕ್ಕೆ ಹಲವಾರು ಕಂಪೆನಿಗಳು ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಾವು ನಮ್ಮ ಕೆಲಸ ಮಾಡಿದ್ದೇವೆ. ಟೀಕೆ ಮಾಡಿದರೂ ಸ್ವಾಗತ, ಹೊಗಳಿದರೂ ಸ್ವಾಗತ. ಜನಸೇವೆ ಮಾಡುವುದೇ ಮೊದಲ ಆದ್ಯತೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
Key words: D.K. Shivakumar, building, new ,IT city , Bidadi







