ಸಿಎಂ ಕುರ್ಚಿಗೆ ಹಗ್ಗಜಗ್ಗಾಟ: ಸರ್ಕಾರದ ಮೇಲೆ ಜನರು ಭರವಸೆ ಕಳೆದುಕೊಂಡಿದ್ದಾರೆ- ಬಿವೈ ವಿಜಯೇಂದ್ರ

ದಕ್ಷಿಣ ಕನ್ನಡ,ನವೆಂಬರ್,19,2025 (www.justkannada.in): ರಾಜ್ಯದಲ್ಲಿ ಸಿಎಂ ಕುರ್ಚಿಗೆ ಹಗ್ಗ ಜಗ್ಗಾಟ ನಡೆಯುತ್ತಿದ್ದು ರಾಜ್ಯ ಸರ್ಕಾರದ ಮೇಲೆ ಜನರು ಭರವಸೆ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಪುತ್ತೂರಿನಲ್ಲಿ ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ,  ಡಿಕೆ ಶಿವಕುಮಾರ್ ಸತ್ಯ ಹರಿಶ್ಚಂದ್ರರ ರೀತಿ ಮಾತನಾಡುತ್ತಿದ್ದಾರೆ.  ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಎಷ್ಟು ಬೇಗ ಈ ಸರ್ಕಾರವನ್ನು ಕಿತ್ತು ಹಾಕುತ್ತೇವೋ ಅಷ್ಟು ಒಳ್ಳೆಯದು ಎಂದರು.

ರಾಜ್ಯದಲ್ಲಿ ಅಭಿವೃದ್ದಿ ಸಂಪೂರ್ಣ ಕುಂಠತವಾಗಿದೆ. ಕೇವಲ ಸಿಎಂ ಕುರ್ಚಿ ವಿಚಾರಕ್ಕೆ ಪೈಪೋಟಿ ಜೋರಾಗಿದೆ ಸಚಿವರು ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ಬರುತ್ತಿದ್ದಾರೆ.  ಭ್ರಷ್ಟಾಚಾರ ಹೆಚ್ಚಾಗಿದೆ.  ಕಾಂಗ್ರೆಸ್ ವಿರುದ್ದ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು  ಬಿವೈ ವಿಜಯೇಂದ್ರ ತಿಳಿಸಿದರು.

Key words: CM, chair, People, lost, faith , government, BY Vijayendra