ಬೆಂಗಳೂರು,ನವೆಂಬರ್,20,2025 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 28 ರಂದು ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ನವೆಂಬರ್ 26 ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ನವೆಂಬರ್ 26 ರಂದು ಸಂಜೆ 4 ಗಂಟೆಗೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚಿಸಲಿದ್ದಾರೆ. ವೇತನ ಬಾಕಿ, ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಪ್ರತಿ ಸಂಘಟನೆಯಿಂದ ಇಬ್ಬರು ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಾರಿಗೆ ನೌಕರರು ನವೆಂಬರ್ 28 ರಂದು ಪ್ರತಿಭಟಾನಾ ಸಮಾವೇಶಕ್ಕೆ ಮುಂದಾಗಿದ್ದರು. ಈ ಹಿನ್ನೆಲೆ ಸಾರಿಗೆ ನೌಕರರ ಮುಖಂಡರ ಸಭೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
Key words: CM Siddaramaiah, meeting, transport, workers







