ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್, ಡಿಸಿಎಂ ಆಗಿ ಇಬ್ಬರು ಪ್ರಮಾಣ ವಚನ ಸ್ವೀಕಾರ

ಪಾಟ್ನಾ,ನವೆಂಬರ್,20,2025 (www.justkannada.in): 10ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಬಿಹಾರ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಹಾಗೂ ಉಪಮುಖ್ಯಮಂತ್ರಿಗಳಾಗಿ ಬಿಜೆಪಿಯ ಸಾಮ್ರಾಟ್ ಚೌದರಿ, ವಿಜಯ್ ಕುಮಾರ್ ಸಿನ್ಹಾ  ಪ್ರಮಾಣ ವಚನ ಸ್ವೀಕಾರ ಮಾಡಿದರು.  ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ ಜೆ.ಪಿ ನಡ್ಡಾ,  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆಂಧ್ರ ಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವೀಸ್ ಭಾಗಿಯಾಗಿದ್ದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ,ಜೆಡಿಯು ನೇತೃತ್ವದ ಎನ್ ಡಿಎ ಮೈತ್ರಿಕೂಡ 202 ಕ್ಷೇತ್ರಗಳಲ್ಲಿ ಜಯ ಸಾಧಿಸಿ ಮತ್ತೆ ಅಧಿಕಾರಕ್ಕೇರಿದೆ.

Key words: Nitish Kumar, sworn , Bihar, CM, two ,DCMs