ಮಸೂದೆಗಳ ಅಂಗೀಕಾರಕ್ಕೆ ರಾಷ್ಟ್ರಪತಿ, ರಾಜ್ಯಪಾಲರಿಗೆ ನ್ಯಾಯಾಲಯ ಸಮಯ ಮಿತಿ ನಿಗದಿಪಡಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ, ನವೆಂಬರ್, 20,2025 (www.justkannada.in):  ಮಸೂದೆಗಳನ್ನು ಅಂಗೀಕರಿಸಲು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ನ್ಯಾಯಾಲಯ ಸಮಯದ ಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​  ತಿಳಿಸಿದೆ.

ತಮಿಳುನಾಡು ಮಸೂದೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನ ತೀರ್ಪಿನ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 200 ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಮುಂದೆ ಮಸೂದೆಯನ್ನು ಮಂಡಿಸುವಾಗ ಲಭ್ಯವಿರುವ ಆಯ್ಕೆಗಳ ಬಗ್ಗೆ ತನ್ನ ಅಭಿಪ್ರಾಯವನ್ನು ನೀಡುವಂತೆ ಸುಪ್ರೀಂ ಕೋರ್ಟ್ ಅನ್ನು ಕೇಳಿದ್ದರು.

ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಸಾಂವಿಧಾನಿಕ ಪೀಠವು, ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಲ್ಲೇಖಿಸಿದ 13 ಪ್ರಶ್ನೆಗಳಿಗೆ ಉತ್ತರಿಸಿ ತನ್ನ ಅಭಿಪ್ರಾಯವನ್ನು  ವ್ಯಕ್ತಪಡಿಸಿದ್ದು, ಮಸೂದೆಗಳನ್ನು ಅಂಗೀಕಕರಿಸಲು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ನ್ಯಾಯಾಲಯ ಸಮಯದ ಮಿತಿ ನಿಗದಿಪಡಿಸಲಾಗದು.  ಕಾಲಮಿತಿಯನ್ನು ವಿಧಿಸುವುದು ಸಂವಿಧಾನಕ್ಕೆ ಖಂಡಿತವಾಗಿ ವಿರುದ್ಧವಾಗಿದೆ ಎಂದು ತಿಳಿಸಿದೆ.

ಏಪ್ರಿಲ್ 2025 ರಲ್ಲಿ, ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳ ಪೀಠವು, ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಧಿಕಾರವನ್ನು ಬಳಸಿಕೊಂಡು, ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ವಿಳಂಬದ ಬಗ್ಗೆ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್.ಎನ್. ರವಿ ನಡುವಿನ ಬಿಕ್ಕಟ್ಟನ್ನು ಪರಿಹರಿಸಿತ್ತು.

ತಮಿಳುನಾಡು ರಾಜ್ಯಪಾಲರ ಪ್ರಕರಣದಲ್ಲಿ ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರು ಶಾಸಕಾಂಗವು ಅಂಗೀಕರಿಸಿದ ಮಸೂದೆಗಳನ್ನು ಅಂಗೀಕರಿಸಲು ಗಡುವನ್ನು ನಿಗದಿಪಡಿಸಿದ ದ್ವಿಸದಸ್ಯ ಪೀಠದ ತೀರ್ಪಿನ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್‌ಗೆ ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ಈ  ತೀರ್ಪು ಬಂದಿದೆ.

Key words: Court, cannot, time limit, President, Governor, pass bills, Supreme Court