ಮಂಡ್ಯ,ನವೆಂಬರ್,24,2025 (www.justkannada.in): ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿ ಚುಂಚನಗಿರಿ ವಿಶ್ವ ವಿದ್ಯಾಲಯ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಎಸ್ ರಾಮೇಗೌಡ ಮತ್ತು ಹಿರಿಯ ಪತ್ರಕರ್ತ ಕರ್ನಾಟಕ ಮಾಧ್ಯಮ ಅಕಾಡಮಿ ಮಾಜಿ ಅಧ್ಯಕ್ಷ ಎಂ.ಸಿದ್ದರಾಜು ಅವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದೇ ತಿಂಗಳ ನವೆಂಬರ್ 26 ರಂದು ಬೆಳಿಗ್ಗೆ 10 ಗಂಟೆಗೆ ಬಿ.ಜಿ.ಎಸ್ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ.ಎನ್.ಎಸ್ ರಾಮೇಗೌಡ ಮತ್ತು ಎಂ.ಸಿದ್ದರಾಜು ಅವರಿಗೆ ಸನ್ಮಾನ ಮಾಡಲಿದ್ದಾರೆ.
ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಖ್ಯಾತ ಸಾಹಿತಿ ಹಾಗೂ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ವಿವಿ ಕುಲಪತಿ ಡಾ.ಎಸ್.ಎನ್ ಶ್ರೀಧರ, ಕುಲಸಚಿವ ಡಾ.ಸಿ.ಕೆ ಸುಬ್ಬರಾಯ ಉಪಸ್ಥಿತರಿರಲಿದ್ದಾರೆ.
Key words: Adichunchanagiri University, felicitates, Kannada Rajyotsava, awardees







