ಬೆಂಗಳೂರು,ನವೆಂಬರ್,25,2025 (www.justkannada.in): ಬೆಳ್ಳೆಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ಬೆಂಗಳೂರು, ಮಂಡ್ಯ, ಮೈಸೂರು ಸೇರಿ ರಾಜ್ಯದ ಹತ್ತು ಕಡೆ ಲೋಕಾಯುಕ್ತ ದಾಳಿಯಾಗಿದೆ.
ಬೆಂಗಳೂರಿನಲ್ಲಿ ಆರ್ ಟಿಒ ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ ಸಿಇಒ ಪುಟ್ಟಸ್ವಾಮಿ, ಶಿವಮೊಗ್ಗ ಮೆಡಿಕಲ್ ಕಾಲೇಜು ಡಿನ್ ಸ್ಟೇನೋ ಮನೆ ಸೇರಿ ಹಲವು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ.
ಬೀದರ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರೇಮ್‌ಸಿಂಗ್ ರಾಥೋಡ್ ಮನೆ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದಲ್ಲಿ ದಾಳಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.
ದಾವಣಗೆರೆ ಎಪಿಎಂಸಿ ಸಹಾಯಕ ನಿರ್ದೇಶಕ ಪ್ರಭು ನಿವಾಸ, ಕಚೇರಿ, ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ SP ಎಂ.ಎಸ್.ಕೌಲಾಪೂರೆ ನೇತೃತ್ವದಲ್ಲಿ ದಾಳಿ ನಡೆಸದಿದೆ. ಹಾವೇರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜನಿಯರ್ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ ನಿವಾಸದ ಮೇಲೆ ಲೋಕಾ ದಾಳಿ ನಡೆದಿದೆ.
ಶಿವಮೊಗ್ಗ ಮೆಡಿಕಲ್ ಕಾಲೇಜು ಡಿನ್ನ ಸ್ಟೇನೋ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕೊಡಗಿನಲ್ಲಿ PWD, ಎಂಜಿನಿಯರ್ ಗಿರೀಶ್ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆಸಿದ್ದು, ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್ ವೀಣಾ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಇನ್ನು ಧಾರವಾಡದ ಕವಿವಿ ಅಂಬೇಡ್ಕರ್ ಸ್ಟಡೀಸ್ ಸಂಯೋಜಕ ನಾಟೀಕರ್ ಅವರ ಯಾಲಕ್ಕಿ ಶೆಟ್ಟರ್ ಕಾಲನಿಯಲ್ಲಿನ ಮನೆ, ಕವಿವಿ ಸಮಾಜಶಾಸ್ತ್ರ ವಿಭಾಗ, ಅಂಬೇಡ್ಕರ್ ಸ್ಟಡೀಸ್, ಕೊಪ್ಪಳದಲ್ಲಿಯ ಮನೆ, ವಿಜಯಪುರ ಜಿಲ್ಲೆಯ ತಾಳಿಕೋಟೆಯ ಸ್ವಂತ ಮನೆಯ ಮೇಲೆ ದಾಳಿ ನಡೆದಿದೆ.
ಧಾರವಾಡದಲ್ಲಿ ಪ್ರೊ.ಸುಭಾಶ್ಚಂದ್ರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೈಸೂರಿನಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್ ರಾಮಸ್ವಾಮಿ ಮನೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದೆ. ಮಂಡ್ಯದಲ್ಲೂ ಏಕಕಾಲಕ್ಕೆ 5 ಕಡೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಪುಟ್ಟಸ್ವಾಮಿ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ತೊರೆಚಾಕನಹಳ್ಳಿ ನಿವಾಸ ಅಲೆಮನೆ ಮೇಲೆ ದಾಳಿ ನಡೆಸಲಾಗಿದೆ.
Key words: Lokayukta, Raid, officers, state, document, verification







