ಅಯೋಧ್ಯೆ, ನವೆಂಬರ್, 25,2025 (www.justkannada.in): ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮಧ್ವಜಾರೋಹಣ ಕಾರ್ಯ ನೆರವೇರಿಸಿದ್ದಾರೆ.
ಇಂದು 11.58 ರ ವೇಳೆಗೆ ಅಭಿಜಿತ್ ಶುಭ ಮುಹೂರ್ತದಲ್ಲಿ ಪ್ರಧಾನಿ ಮೋದಿ ಅಯೋಧ್ಯೆಯ ರಾಮಮಂದಿರ ಮೇಲೆ ಧರ್ಮ ಧ್ವಜಾರೋಹಣ ನೆರವೇರಿಸಿದ್ದಾರೆ. 191 ಅಡಿ ಎತ್ತರದ ರಾಮ ಮಂದಿರದ ಮೇಲ್ಭಾಗದಲ್ಲಿ 10 ಅಡಿ ಅಗಲ ಮತ್ತು 20 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜ ರಾರಾಜಿಸುತ್ತಿದೆ. ದ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸಲಾಗಿದೆ.
ಇಂದು ಭಕ್ತರಿಗೆ ದೇವಾಲಯಕ್ಕೆ ಆಗಮಿಸಲು ಮುಕ್ತ ಆಹ್ವಾನ ನೀಡಿದಂತಾಗಿದೆ. ಶ್ರೀರಾಮ ಮತ್ತು ಸೀತಾ ಮಾತೆಯ ದೈವಿಕ ವಿವಾಹವನ್ನು ಆಚರಿಸುವ ವಿವಾಹ ಪಂಚಮಿಯ ಸಂದರ್ಭದಲ್ಲಿ ಅಯೋಧ್ಯೆ ಪೂರ್ಣ ವೈಭವದಿಂದ ಹೊಳೆಯುತ್ತಿದೆ.
ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಪೇಜಾವರ ಶ್ರೀಗಳು ಸೇರಿ ಭಕ್ತಾದಿಗಳು ಧರ್ಮ ಧ್ವಜಾರೋಹಣಕ್ಕೆ ಸಾಕ್ಷಿಯಾದರು.
Key words: PM Modi, hoisted, religious flag, , Ram temple, Ayodhya.







