ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭಹಾರೈಕೆ, ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

ಬೆಂಗಳೂರು ನವೆಂಬರ್, 25,2025 (www.justkannada.in): ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ  ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದರು.

ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ  ಸಿಎಂ ಸಿದ್ದರಾಮಯ್ಯ  ಅವರು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.

ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ. ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ಸಿದ್ದರಾಮಯ್ಯ ವಿಶೇಷವಾಗಿ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ  ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್  ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

Key words: CM, congratulates, World Cup-winning, blind women’s, cricket team