ಸಚಿವ ಸತೀಶ್ ಜಾರಕಿಹೊಳಿ ಜತೆ ಡಿಸಿಎಂ ಡಿಕೆ ಶಿವಕುಮಾರ್ ರಹಸ್ಯ ಮೀಟಿಂಗ್

ಬೆಂಗಳೂರು,ನವೆಂಬರ್,26,2025 (www.justkannada.in): ಅಧಿಕಾರ ಹಂಚಿಕೆ ಗೊಂದಲ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ್ದು ಈ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ತಡರಾತ್ರಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಜೊತೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಹೋಟೆಲ್ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನ ಭೇಟಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು 1 ಗಂಟೆಗೂ ಹೆಚ್ಚು ಸಮಯ ಅಧಿಕಾರ ಹಂಚಿಕೆ ಗೊಂದಲದ  ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಮೊನ್ನೆಯಷ್ಟೆ ಸಚಿವ ಕೆ.ಜೆ ಜಾರ್ಜ್ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದರು. ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೂ ಮಾತನಾಡಿದ್ದರು. ಇದೀಗ ಸತೀಶ್ ಜಾರಕಿಹೊಳಿ ಆವರ ಜೊತೆ ರಹಸ್ಯೆ ಸಭೆ ನಡೆಸಿರುವುದು ಬಾರಿ ಕುತೂಹಲಕ್ಕೆ ಕಾರಣವಾಗಿದೆ.

Key words: DCM, DK Shivakumar, secret meeting, Minister, Sathish Jarkiholi