ಬೆಂಗಳೂರು,ನವೆಂಬರ್,26,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಸಿದ್ದರಾಮಯ್ಯರಿಗೆ ಅವಕಾಶ ಕೊಟ್ಟಿದೆ. ಡಿಕೆ ಶಿವಕುಮಾರ್ ಗೂ ಆಸೆ ಇದ್ದೇ ಇರುತ್ತದೆ. ಪಕ್ಷದ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿದ್ದೇವೆ. ಸಿದ್ದರಾಮಯ್ಯ ಜೊತೆಗೆ ಮೊದಲಂದಲೂ ಗುರುತಿಸಿಕೊಂಡಿದ್ದೇವೆ ಎಂದರು.
ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ. ಬಂದಾಗ ಅದರ ಬಗ್ಗೆ ಚರ್ಚೆ ಮಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
Key words: no discussion, changing, CM, moment, Minister, Sathish Jarkiholi







