‘ಕೊಟ್ಟ ಮಾತು’ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ನವೆಂಬರ್,27,2025 (www.justkannada.in): ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಕೊಟ್ಟ ಮಾತು ವಿಚಾರವಾಗಿ ನಾನು ಯಾವುದೇ ಪೋಸ್ಟ್ ಮಾಡಿಲ್ಲ. ಅದು ಫೇಕ್ ಅಥವಾ ಯಾವ ಪೋಸ್ಟ್ ಅಂತಾ ನನಗೆ ಗೊತ್ತಿಲ್ಲ.  ಹೈಕಮಾಂಡ್ ಯಾವಾಗ ಕರೆಯುತ್ತಾರೋ ಆಗ ಹೋಗುತ್ತೇವೆ ಎಂದಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ. ಯಾರೇ ಆಗಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಅದು ಜಡ್ಜ್ ಆಗಿರಲಿ ಅಧ್ಯಕ್ಷರಾಗಲಿ ಯಾರೇ ಆಗಿರಲಿ ನನ್ನನ್ನು ಸೇರಿಸಿ ಸಹ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಹೇಳಿದ್ದರು ಎಂದು ಸುದ್ದಿಯಾಗಿತ್ತು.

Key words: No post, about ,’promise, DCM, DK Shivakumar