ಚಾಮರಾಜನಗರ,ನವೆಂಬರ್,28,2025 (www.justkannada.in): ದೊಡ್ಡಬಳ್ಳಾಪುರದಲ್ಲಿ ನಡೆದ ವಿಶ್ವ ದಾಖಲೆಯ ಪ್ರಥಮ ಟೆಲಿಸ್ಕೋಪ್ ತಯಾರಿಕಾ ಶಿಬಿರದಲ್ಲಿ ಪಾಲ್ಗೊಂಡು ದೂರದರ್ಶಕವನ್ನು ತಯಾರಿಸಿ ಜಿಲ್ಲೆಗೆ ಹೆಮ್ಮೆ ತಂದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇಶಿಪುರದ ಶಿಕ್ಷಕ ನಂದೀಶ್ ಜೆ ಅವರಿಗೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಭಿನಂದನೆ ಸಲ್ಲಿಸಿದ್ದಾರೆ. 
ದೊಡ್ಡಬಳ್ಳಾಪುರದಲ್ಲಿ ನಡೆದ ವಿಶ್ವ ದಾಖಲೆಯ ಪ್ರಥಮ ಟೆಲಿಸ್ಕೋಪ್ ತಯಾರಿಕಾ ಶಿಬಿರದಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇಶಿಪುರದ ಶಿಕ್ಷಕ ನಂದೀಶ್ ಜೆ ಅವರು ಸಕ್ರಿಯವಾಗಿ ಭಾಗವಹಿಸಿ ದೂರದರ್ಶಕವನ್ನು ತಯಾರಿಸಿರುವುದು ಜಿಲ್ಲೆಗೆ ಹೆಮ್ಮೆ ತಂದಿದೆ. ಚಾಮರಾಜನಗರ ಜಿಲ್ಲಾಡಳಿತವು ನಂದೀಶ ಜೆ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾಡಳಿತ ತಿಳಿಸಿದೆ.
ಈ ಶಿಬಿರವನ್ನು ಶಾಲಾ ಶಿಕ್ಷಣ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ, ಇಸ್ರೋ – ಭಾರತ ಸರ್ಕಾರ, ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ (KSSRC) ಇವರ ಸಂಯುಕ್ತ ಸಹಕಾರದಲ್ಲಿ ಆಯೋಜಿಸಲಾಗಿದ್ದು, ಒಟ್ಟು 150 ಟೆಲಿಸ್ಕೋಪ್ ತಯಾರಿಕಾ ಕಾರ್ಯಾಗಾರದ ಸಂದರ್ಭದಲ್ಲಿ ನಂದೀಶ್ ಅವರ ವಿಜ್ಞಾನಾಧಾರಿತ ಕೌಶಲ್ಯ, ತಾಂತ್ರಿಕ ಸಾಮರ್ಥ್ಯ ಮತ್ತು ತೊಡಗು ವಿಶಿಷ್ಟವಾಗಿ ಗುರುತಿಸಲ್ಪಟ್ಟಿದೆ.
ತಮ್ಮ ಶ್ರಮ ಮತ್ತು ಪ್ರತಿಭೆಯಿಂದ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್, ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಎಂಬ ಗೌರವಾನ್ವಿತ ಸ್ಥಾನಗಳನ್ನು ಪಡೆದು ನಮ್ಮ ಚಾಮರಾಜನಗರ ಜಿಲ್ಲೆಯ ಹೆಸರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೊಂಡೊಯ್ದಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಇಸ್ರೋ ಮಾಜಿ ಅಧ್ಯಕ್ಷ ಡಾ. ಎ. ಎಸ್. ಕಿರಣ್ ಕುಮಾರ್, ನಿವೃತ್ತ ಮುಖ್ಯ ನ್ಯಾಯಮೂರ್ತಿಯಾದ ನಾಗಮೋಹನ್ ದಾಸ್ ಮೊದಲಾದ ಗಣ್ಯರು ನಂದೀಶ ಜೆ ಅವರ ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.
ಇಂದು ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ಡಿಸಿ ಶಿಲ್ಪಾನಾಗ್ ಅವರು ನಂದೀಶ್ ಅವರನ್ನು ಸನ್ಮಾನಿಸಿದ್ದಾರೆ.
Key words: District, credit, telescope, Chamarajanagar, DC, congratulates, teacher







