ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ನವೆಂಬರ್,28,2025 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಗೊಂದಲದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಚರ್ಚಿಸಿದ್ದಾರೆ.

ಇಂದು ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾದ ಸಚಿವ ಪ್ರಿಯಾಂಕ್ ಖರ್ಗೆ ಸಮಾಲೋಚನೆ ನಡೆಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಬಳಿಕ ಹೈಕಮಾಂಡ್ ಸಭೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಸಾಹೇಬ್ರು ಹೇಳಿದರೆ ಸಭೆ ಆಗುತ್ತೆ. ಮಲ್ಲಿಕಾರ್ಜುನ ಖರ್ಗೆ ಕರೆದ್ರೆ ಎಲ್ಲರೂ ಹೋಗುತ್ತಾರೆ. ಹೈಕಮಾಂಡ್ ನಾಯಕರಿಗೆ ಸಮಯ ಪ್ರಜ್ಞೆ ಇದೆ.  130 ವರ್ಷಗಳಿಂದ ಇದೇ ತರಹ ನಡೆದುಕೊಂಡು ಬಂದಿದೆ ಎಂದು ಹೇಳಿದರು.

Key words: Minister, Priyank Kharge, met, DCM, DK Shivakumar