ಬೆಂಗಳೂರು,ಡಿಸೆಂಬರ್,1,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ನಾಳೆ ಬ್ರೇಕ್ ಫಾಸ್ಟ್ ಗೆ ತಮ್ಮ ನಿವಾಸಕ್ಕೆ ಬರುವಂತೆ ಡಿಸಿಎಂ ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಕಾಂಗ್ರೆಸ್ ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು.ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ ರವಾನಿಸಿದ್ದರು.
ಈ ನಡುವೆ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಿಎಂ ಸಿದರಾಮಯ್ಯ ಅವರನ್ನು ತಮ್ಮ ಮನೆಗೆ ನಾಳೆ ಮುಂಜಾನೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ. ವಿಧಾನಸೌಧದ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಅಧಿಕೃತವಾಗಿ ಈ ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ.
Key words: DCM, DK Shivakumar, invites, CM Siddaramaiah, breakfast







