ಬೆಂಗಳೂರು,ಡಿಸೆಂಬರ್,2,2025 (www.justkannada.in): ರಾಜ್ಯದಲ್ಲಿ ಉಂಟಾಗಿದ್ದ ಅಧಿಕಾರ ಹಂಚಿಕೆಯ ಗೊಂದಲ, ಭಿನ್ನಾಭಿಪ್ರಾಯಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.
ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಸಿದ್ದರಾಮಯ್ಯನವರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು. ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆದಿದ್ದರು.
ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಗೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಿಎಂ ಸಿದ್ದರಾಮಯ್ಯ ಉಪಹಾರ ಸೇವಿಸಿದ್ದಾರೆ.
ಸಿಎಂ ಸಿದ್ದರಾಮಯ್ಯರಿಗಾಗಿ ನಾಟಿಕೋಳಿ ಸಾರು ಮತ್ತು ಇಡ್ಲಿಯನ್ನ ತಯಾರಿಸಿದ್ದು ಸಿಎಂ ಸಿದ್ದರಾಮಯ್ಯ ಸವಿದರು. ಈ ವೇಳೆ ಮಾಜಿ ಸಂಸದ ಡಿ.ಕೆ ಸುರೇಶ್ ಉಪಸ್ಥಿತರಿದ್ದರು.
Key words: CM Siddaramaiah, breakfast meeting, DCM, DK Shivakumar, residence







