ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್; ಸಿನೆಮಾ ಇನ್ನೂ ಬಾಕಿ ಇದೆ-ಮಾಜಿ ಸಿಎಂ ಬೊಮ್ಮಾಯಿ

ನವದೆಹಲಿ,ಡಿಸೆಂಬರ್,2,2025 (www.justkannada.in):  ಸಿಎಂ ಸಿದ್ದರಾಮಯ್ಯ  ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್ ಅಷ್ಟೆ, ಇನ್ನೂ ಸಿನೆಮಾ  ಬಾಕಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದಾರೆ.  ರಾಜ್ಯದ ಜನರ ಶ್ರೇಯೋಭಿವೃದ್ದಿ ಆಸಕ್ತಿ ವಹಿಸುತ್ತಿಲ್ಲ.  ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ತಿಳಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಛೆಯಾಗಿದೆ. ಕಾಂಗ್ರೆಸ್ ನಲ್ಲಿ ಗೊಂದಲ ಮುಂದುವರೆದಿದೆ. ಕಾಂಗ್ರೆಸ್ ಹೈಕಮಾಂಡ್ ಎಲ್ಲಿದೆ? ಯಾರು ಹೈಕಮಾಂಡ್? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್ ಗೆ ಏನು ಅರ್ಥ ಇದೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

Key words: Breakfast meeting,teaser, movie, pending, Former CM, Bommai