Sunday, September 6, 2026

BDA Apartments

Home Front Page ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳೂರು, ಡಿಸೆಂಬರ್, 03,2025 (www.justkannada.in):  ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌   ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ವೇಣುಗೋಪಾಲ್ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದರು.

ಕರೆದರೆ ಮಾತ್ರ ದೆಹಲಿಗೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.

Key words: No political, discussion, with, Venugopal, CM Siddaramaiah