ಪತ್ನಿಯನ್ನು ಹತ್ಯೆಗೈದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣು

ಬೆಂಗಳೂರು,ಡಿಸೆಂಬರ್,4,2025 (www.justkannada.in): ವೈರ್ ನಿಂದ ಪತ್ನಿಯ ಕುತ್ತಿಗೆಗೆ ಬಿಗಿದು ಹತ್ಯೆಗೈದು ಬಳಿಕ ಪತಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ನಡೆದಿದೆ.

ಸುಬ್ರಹ್ಮಣ್ಯಪುರದ ಚಿಕ್ಕಗೌಡನ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಪತ್ನಿ ಬೇಬಿ (65) ಹಾಗೂ ಪತಿ ವೆಂಕಟೇಶನ್ (65)  ಮೃತಪಟ್ಟವರು.  ಪತಿ ವೆಂಕಟೇಶನ್ ಬಿಎಂಟಿಸಿ ಬಸ್ ಚಾಲಕರಾಗಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು. ಪತ್ನಿಗೆ ಸ್ಟ್ರೋಕ್ ಆಗಿ ಆಗಿ ವ್ಹೀಲ್ ಚೇರ್ ನಲ್ಲಿ ಓಡಾಡುತ್ತಿದ್ದರು.

ಈ ನಡುವೆ ಗಂಡ ಹೆಂಡತಿ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ಡಿ.2 ಎಂದು ಇಬ್ಬರ ನಡುವೆ ಜಗಳ ವಿಕೋಪಕ್ಕೆ ತಿರುಗಿ ಪತಿ ವೆಂಕಟೇಶನ್ ವೈರ್ ನಿಂದ ಪತ್ನಿಯ ಕುತ್ತಿಗೆಗೆ ಬಿಗಿದು ಹತ್ಯೆ ಮಾಡಿ ನಂತರ ಪತಿ ಕೂಡ ಅದೇ ವೈರ್ ನಿಂದ ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಸುಬ್ರಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಗಿದೆ.

Key words: Husband, commits, suicide ,after, killing, wife