ಮಂಡ್ಯ,ಡಿಸೆಂಬರ್,4,2025 (www.justkannada.in): ಅಧಿಕಾರ ಹಂಚಿಕೆ, ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ ಹಲವು ಜಿಲ್ಲೆಗಳ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ನಾಳೆ ಸಿಎಂ ಸಿದ್ದರಾಮಯ್ಯ ಮಂಡ್ಯಗೆ ಭೇಟಿ ನೀಡಲಿದ್ದಾರೆ.
ನಾಳೆಯಿಂದ ಡಿಸೆಂಬರ್ 7 ರವರೆಗೆ ಮಂಡ್ಯದ ವಿ.ಸಿ ಫಾರಂನಲ್ಲಿ ಕೃಷಿ ಮೇಳ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಂಡ್ಯಗೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ ಕೃಷಿಮೇಳವನ್ನ ಉದ್ಘಾಟಿಸಲಿದ್ದಾರೆ. ಈ ವೇಳೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಥಳೀಯ ಶಾಸಕರು ಉಪಸ್ಥಿತರಿರಲಿದ್ದಾರೆ.
ನಿನ್ನೆ ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸ ಕೈಗೊಂಡು ನಾರಾಯಣಗುರು- ಗಾಂಧಿ ಸಂವಾದ ಶತಮಾನೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.
Key words: CM, Siddaramaiah, visit, Mandya, tomorrow







